Friday, November 7, 2025

ಮುಂದಿನ ವರ್ಷ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಂದು ಕಡೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಬಾಂಧವ್ಯವನ್ನು ಪದೇ ಪದೇ ಹೊಗಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮತ್ತೊಂದು ಕಡೆ ವ್ಯಾಪಾರ ಯುದ್ಧವನ್ನು ಮುಂದುವರಿಸಿದ್ದಾರೆ. ಇದೆಲ್ಲದರ ನಡುವೆ ಮುಂದಿನ ವರ್ಷ ತಾವು ಭಾರತಕ್ಕೆ ಭೇಟಿ ನೀಡುವ ಸುಳಿವು ಕೊಟ್ಟಿದ್ದಾರೆ.

ತೂಕ ಇಳಿಸುವ ಔಷಧಿಗಳ ಬೆಲೆಗಳನ್ನು ಕಡಿಮೆ ಮಾಡುವ ಹೊಸ ಯೋಜನೆಯನ್ನು ಅನಾವರಣಗೊಳಿಸಿದ ನಂತರ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೋದಿ ಒಬ್ಬ ಮಹಾನ್‌ ವ್ಯಕ್ತಿ, ನನ್ನ ಒಳ್ಳೆಯ ಸ್ನೇಹಿತ ಕೂಡ. ಎರಡೂ ರಾಷ್ಟ್ರಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಬಲಪಡಿಸುವ ಪ್ರಯತ್ನಗಳ ಭಾಗವಾಗಿ ಮುಂದಿನ ವರ್ಷ ನಾನು ಭಾರತಕ್ಕೆ ಭೇಟಿ ನೀಡಬಹುದು ಎಂದ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ಸಂಭಾಷಣೆಗಳು ಸಕಾರಾತ್ಮಕವಾಗಿ ಪ್ರಗತಿಯಲ್ಲಿವೆ. ನಾನು ಭಾರತಕ್ಕೆ ನೀಡಬೇಕೆಂದು ಅವರು ಬಯಸುತ್ತಾರೆ. ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಿದ್ದಾರೆ. ಅವರೊಂದಿಗಿನ ಪ್ರವಾಸ ಉತ್ತಮವಾಗಿರಲಿದೆ. ಎಲ್ಲಾ ವ್ಯಾಪಾರ ಮಾತುಕತೆಗಳು ಉತ್ತಮವಾಗಿ ನಡೆಯುತ್ತಿವೆ. ಈ ಸಂಬಂಧವನ್ನು ಇನ್ನಷ್ಟು ಬಲಪಡಿಸುವುದರ ಭಾಗವಾಗಿ ಭಾರತಕ್ಕೆ ಮುಂದಿನ ವರ್ಷ ಭೇಟಿ ನೀಡಬಹುದು ಎಂದು ಹೇಳಿದ್ದಾರೆ.

error: Content is protected !!