ರಷ್ಯಾ ವಿರುದ್ಧ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧ ಘೋಷಿಸಿದ ಅಮೆರಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ರಷ್ಯಾ ಮೇಲೆ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧ ಘೋಷಿಸಿದ್ದಾರೆ.
ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಕ್ರಮಣಕಾರಿ ವರ್ತನೆ ತೋರುತ್ತಿದ್ದಾರೆ ಎಂದು ಬಿಡೆನ್ ದೂರಿದ್ದು, ರಷ್ಯಾ ವಿರುದ್ಧ ಸರಣಿ ನಿರ್ಬಂಧಗಳನ್ನು ಘೋಷಿಸಿದ್ದಾರೆ.

ರಷ್ಯಾ ವಿರುದ್ಧ ಆರ್ಥಿಕ ನಿರ್ಬಂಧಗಳನ್ನು ಘೋಷಿಸಿದ ನಂತರ ಶ್ವೇತಭವನದಲ್ಲಿ ಜೋ ಬಿಡೆನ್ ಮಾತನಾಡಿದ್ದು, ರಷ್ಯಾ ಆಕ್ರಮಣಕಾರಿ ಎಂಬುದರಲ್ಲಿ ಅನುಮಾನ ಇಲ್ಲ. ಇದರಿಂದ ನಾವು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಂಭೀರವಾಗಿ ಗಮನ ಹರಿಸಿದ್ದೇವೆ. ರಷ್ಯಾ ಆಕ್ರಮಣ ಹೆಚ್ಚಾದರೆ ನಿರ್ಬಂಧಗಳು ಹೆಚ್ಚಾಗಲಿದೆ ಎಂದು ಎಚ್ಚರಿಸಿದ್ದಾರೆ.

ರಷ್ಯಾದ ಕ್ರಮಗಳು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ ಮಾಡಿವೆ. ಅಮೆರಿಕದ ಮಿತ್ರರಾಷ್ಟ್ರಗಳು ಮತ್ತು ಪಾಲುದಾರ ದೇಶಗಳೊಂದಿಗೆ ನಿರ್ಬಂಧಗಳ ಬಗ್ಗೆ ಚರ್ಚೆಯಾಗಿದೆ. ರಷ್ಯಾ ಆಕ್ರಮಕಾರಿ ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದ ಪುಟಿನ್ ಮಾತನ್ನೂ ಬಿಡೆನ್ ವಿರೋಧಿಸಿದ್ದಾರೆ.

ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ವಿಇಬಿ ಹಾಗೂ ಮಿಲಿಟರಿ ಬ್ಯಾಂಕ್ ಮೇಲೆ ಸಂಪೂರ್ಣ ನಿರ್ಬಂಧ ಹಾಗೂ ರಷ್ಯಾದ ಸರ್ಕಾರಕ್ಕೆ ಪಾಶ್ಚಿಮಾತ್ಯ ಹಣಕಾಸು ಸೌಲಭ್ಯವನ್ನು ಕಡಿತಗೊಳಿಸಿದ್ದೇವೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!