ಪ್ರಧಾನಿ ಮೋದಿಯನ್ನು ಭೇಟಿಯಾದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜಿ 20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.
ಇಬ್ಬರೂ ವಿಶ್ವ ನಾಯಕರು ದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭೇಟಿಯಾದರು.

ಈ ವೇಳೆ ದೆಹಲಿ ಮತ್ತು ವಾಷಿಂಗ್ಟನ್ ಡಿಸಿ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಆಳಗೊಳಿಸುವ ವ್ಯಾಪಕ ಶ್ರೇಣಿಯ ವಿಷಯಗಳು ಮತ್ತು ಕ್ರಮಗಳ ಬಗ್ಗೆ ಚರ್ಚಿಸಿದರು.

ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಅವರ ಚರ್ಚೆಗಳು ವಿವಿಧ ವಿಷಯಗಳನ್ನು ಒಳಗೊಂಡಿವೆ ಮತ್ತು ಭಾರತ ಮತ್ತು ಯುಎಸ್‌ಎ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಾಢವಾಗಿಸುತ್ತದೆ ಎಂದಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!