ಯುದ್ಧಪೀಡಿತ ಉಕ್ರೇನ್ ನಲ್ಲಿ ದಿಢೀರ್ ಪ್ರತ್ಯಕ್ಷರಾದ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಷ್ಯಾ-ಉಕ್ರೇನ್ ನಡುವಿನ ಕದನ ಶುರುವಾಗಿ ವರ್ಷವಾಗುತ್ತ ಬಂದಿದೆ. ಈ ಮಧ್ಯೆ ಇಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ದಿಢೀರನೆ ಉಕ್ರೇನ್‌ಗೆ ಭೇಟಿ ನೀಡಿದ್ದಾರೆ.

ರಾಜಧಾನಿ ಕೀವ್‌ಗೆ ಬಂದಿಳಿದ ದೊಡ್ಡಣ್ಣನನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸ್ವಾಗತಿಸಿದರು.

ಫೆಬ್ರವರಿ 22ರವೇಳೆಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಪ್ರಧಾನಿ ಮಾಟೆಸ್ಜ್ ಮೊರಾವಿಕಿ ಅವರೊಂದಿಗೆ ಅಮೆರಿಕ ಪಡೆಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲಿದ್ದಾರೆ. ಆದರೆ ಅದಕ್ಕೂ ಮುನ್ನ ಬೈಡೆನ್‌ ಉಕ್ರೇನ್‌ಗೆ ಭೇಟಿ ನೀಡಿರೋದು ತೀವ್ರ ಕುತೂಹಲ ಕೆರಳಿಸಿದೆ.

ಫೆಬ್ರವರಿ 24 ರಂದು ರಷ್ಯಾ, ಉಕ್ರೇನ್ ಮೇಲೆ ಯುದ್ಧ ಆರಂಭಿಸಿ ಒಂದು ವರ್ಷವಾಗಲಿದೆ. ಹಾಗಾಗಿ ಬೈಡೆನ್‌ ಅವರ ಭೇಟಿ ಜಗತ್ತಿನಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಹಿಂದೆ ಕೂಡ ಬೈಡೆನ್‌ ಹಾಗೂ ಝೆಲೆನ್ಸ್ಕಿ ಭೇಟಿಯಾಗಿದ್ದರು. ಆದ್ರೆ ಅಮೆರಿಕ ಅಧ್ಯಕ್ಷರು ಕೀವ್‌ಗೆ ವಿಸಿಟ್‌ ಮಾಡಿರೋದು ಇದೇ ಮೊದಲು.

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಕೀವ್‌ನಲ್ಲಿ ಉಕ್ರೇನ್‌ಗೆ 500 ಮಿಲಿಯನ್ ಡಾಲರ್‌ ಮಿಲಿಟರಿ ಪ್ಯಾಕೇಜ್ ನೀಡುವುದಾಗಿ ತಿಳಿಸಿದ್ದಾರೆ. ಉಕ್ರೇನ್‌ಗೆ ಶಸ್ತ್ರಾಸ್ತ್ರಗಳ ನೆರವನ್ನೂ ನೀಡಲು ಅಮೆರಿಕ ಮುಂದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!