Saturday, October 11, 2025

ಅಮೆರಿಕ ಅಧ್ಯಕ್ಷ ಟ್ರಂಪ್ ಕೈ ತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ: ಶ್ವೇತ ಭವನದ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವೆನೆಜುವೆಲಾದ ಪ್ರಜಾಪ್ರಭುತ್ವ ಪರ ಕಾರ್ಯಕರ್ತೆ ಮರಿಯಾ ಕೊರಿನಾ ಮಚಾಡೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ಇದಕ್ಕೆ ಶ್ವೇತ ಭವನ ಪ್ರತಿಕ್ರಿಯೆ ನೀಡಿದೆ.

ನೊಬೆಲ್ ಸಮಿತಿಯು ಶಾಂತಿಯ ಮೇಲೆ ರಾಜಕೀಯವನ್ನು ಇರಿಸುತ್ತದೆ ಎಂದು ಸಾಬೀತುಪಡಿಸಿದೆ ಎಂದು ಶ್ವೇತಭವನದ ವಕ್ತಾರ ಸ್ಟೀವನ್ ಚೆಯುಂಗ್ ಶುಕ್ರವಾರ ಸಂಜೆ ಹೇಳಿದ್ದಾರೆ.

ಅಧ್ಯಕ್ಷ ಟ್ರಂಪ್ ಶಾಂತಿ ಒಪ್ಪಂದಗಳನ್ನು ಮಾಡಿಕೊಳ್ಳುವುದನ್ನು, ಯುದ್ಧಗಳನ್ನು ಕೊನೆಗೊಳಿಸುವುದನ್ನು ಮತ್ತು ಜೀವಗಳನ್ನು ಉಳಿಸುವುದನ್ನು ಮುಂದುವರಿಸುತ್ತಾರೆ. ಅವರು ಮಾನವೀಯ ಹೃದಯವನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.ಇನ್ನೂ ಟ್ರಂಪ್ ಸ್ವತಃ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಓಸ್ಲೋದಲ್ಲಿ, ನೊಬೆಲ್ ಸಮಿತಿಯು ಈ ವರ್ಷದ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಮರಿಯಾ ಕೊರಿನಾ ಮಚಾಡೊ ಅವರಿಗೆ ಘೋಷಿಸಲಾಗಿದೆ. ಅವರು ಸದ್ಯಕ್ಕೀಗ ವೆನೆಜುವೆಲಾ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕಿಯಾಗಿದ್ದಾರೆ. ಮಚಾದೊ 20 ವರ್ಷಗಳ ಹಿಂದೆ ತಮ್ಮ ದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗಾಗಿ ಧ್ವನಿ ಎತ್ತಿದ್ದರು.

ಟ್ರಂಪ್‌ ಸಹ ಪ್ರಶಸ್ತಿಯ ಪ್ರಬಲ ಆಕಾಂಕ್ಷಿಯಾಗಿದ್ದರು. ಕೆಲವು ತಿಂಗಳಿಂದ ಟ್ರಂಪ್ ತಮ್ಮನ್ನು ಜಾಗತಿಕ ಶಾಂತಿಪ್ರಿಯ ಎಂದು ಸಕ್ರಿಯವಾಗಿ ಪ್ರಚಾರ ಮಾಡಿಕೊಂಡಿದ್ದರು, ಅವರ 20 ಅಂಶಗಳ ಗಾಜಾ ಶಾಂತಿ ಯೋಜನೆಯನ್ನು ಎತ್ತಿ ತೋರಿಸಿದ್ದರು, ಹಲವಾರು ಯುದ್ಧಗಳನ್ನು ಕೊನೆಗೊಳಿಸಿದ ಕೀರ್ತಿಯನ್ನು ತಮಗೆ ತಾವೇ ಕೊಟ್ಟುಕೊಂಡಿದ್ದರು. 8 ತಿಂಗಳಲ್ಲಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಪದೇಪದೆ ಹೇಳಿಕೊಳ್ಳುತ್ತಿದ್ದರು.

error: Content is protected !!