ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿರಿಯಾ ಗಡಿ ಸಮೀಪದ ಈಶಾನ್ಯ ಜೋರ್ಡಾನ್‌ನಲ್ಲಿ ಅಮೆರಿಕ ಸೇನೆಯ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದಾರೆ.
12 ಜನಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮಾತನಾಡಿದ್ದಾರೆ.
ಇದು ಇರಾನ್ ಬೆಂಬಲಿತ ಉಗ್ರಗಾಮಿಗಳು ನಡೆಸಿದ ದಾಳಿ ಇರಬಹುದು, ನಮ್ಮ ಸೈನಿಕರು ಮೃತಪಟ್ಟಿದ್ದಾರೆ. ಅಮೆರಿಕ ಸುಮ್ಮನೆ ಕೂರೋ ಮಾತೇ ಇಲ್ಲ ಎಂದು ಪ್ರತಿದಾಳಿ ಎಚ್ಚರಿಕೆ ನೀಡಿದ್ದಾರೆ.