Saturday, March 25, 2023

Latest Posts

ಮಾರ್ಚ್‌ 1ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಅಮೆರಿಕ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್‌ ಅವರು ಮಾರ್ಚ್ 1ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.

ನವದೆಹಲಿಯಲ್ಲಿ ಮಾ. 1ರಂದು ನಡೆಯಲಿರುವ ಜಿ 20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್, ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್ ಅವರೊಂದಿಗೆ ಆ್ಯಂಟನಿ ಬ್ಲಿಂಕನ್ ಕೂಡ ಭಾಗವಹಿಸಲಿದ್ದಾರೆ.

ಭಾರತಕ್ಕೆ ಪ್ರಯಾಣಿಸುವ ವೇಳೆ ಬ್ಲಿಂಕೆನ್ ಕಜಕಿಸ್ತಾನ್, ಉಜ್ಬೇಕಿಸ್ತಾನ್ ಪ್ರದೇಶಗಳಿಗೂ ಫೆಬ್ರವರಿ 28 ರಿಂದ ಮಾರ್ಚ್ 3 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಗುರುವಾರ ತಿಳಿಸಿದೆ.

ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ, ಬಹುಪಕ್ಷೀಯತೆಯ ಬಲಪಡಿಸುವಿಕೆ ಸೇರಿದಂತೆ ಆಹಾರ, ಇಂಧನ ಭದ್ರತೆ, ಸುಸ್ಥಿರ ಅಭಿವೃದ್ಧಿಯಲ್ಲಿ ಸಹಕಾರದ ಕುರಿತು ಬ್ಲಿಂಕೆನ್‌ ಚರ್ಚೆ ನಡೆಸಲಿದ್ದಾರೆ ಎಂದು ಅಮೆರಿಕ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದ ಆತಿಥ್ಯದಲ್ಲಿ ಜಿ 20 ಶೃಂಗಸಭೆಯು ಸೆಪ್ಟೆಂಬರ್ 9 ಮತ್ತು 10ರಂದು ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವ ವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!