February 21, 2026
Saturday, February 21, 2026
spot_img

ಅಮೆರಿಕ ‘ಸುಪ್ರೀಂ’ ನಿಂದ ಟ್ರಂಪ್‌ ಸುಂಕ ರದ್ದು: ಭಾರತದ ಫಸ್ಟ್ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಸುಪ್ರೀಂ ಕೋರ್ಟ್ ಡೊನಾಲ್ಡ್‌ ಟ್ರಂಪ್‌ ಹೇರಿದ್ದ ಜಾಗತಿಕ ಸುಂಕಗಳನ್ನ ರದ್ದುಗೊಳಿದ್ದು, ಈ ಕುರಿತು ಭಾರತವಾಣಿಜ್ಯ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದಾರೆ.

ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾವು ಗಮನಿಸಿದ್ದೇವೆ. ಅಧ್ಯಕ್ಷ ಟ್ರಂಪ್ ಆ ನಿಟ್ಟಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುಎಸ್ ಸರ್ಕಾರ ಈಗಾಗಲೇ ಕೆಲವು ಕ್ರಮಗಳನ್ನು ಪ್ರಕಟಿಸಿದೆ. ಈ ಎಲ್ಲಾ ಬೆಳವಣಿಗೆಗಳ ಪರಿಣಾಮಗಳಿ ಬಗ್ಗೆ ನಾವು ಅಧ್ಯಯನ ಮಾಡುತ್ತಿದ್ದೇವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಅಮೆರಿಕದ ಸುಪ್ರೀಂ ಕೋರ್ಟ್ಜಾಗತಿಕ ಸುಂಕಗಳನ್ನು ಅಸಂವಿಧಾನಿಕ ಎಂದು ಘೋಷಿಸಿದ್ದು, ಆದರೆ ಈ ತೀರ್ಪಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೆ ಸವಾಲು ಹಾಕಿದ್ದು, ಹೊಸ ಟ್ಯಾರಿಫ್‌ ಟ್ರಂಪ್‌ ಘೋಷಿಸಿದ್ದಾರೆ.

ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್ ಹೇರಿಕೆ ಮಾಡಿದ್ದಾರೆ. ಸೆಕ್ಷನ್ 122 ರ ಅಡಿಯಲ್ಲಿ 10% ಜಾಗತಿಕ ಸುಂಕವನ್ನು ವಿಧಿಸುವ ಆದೇಶವನ್ನು ಟ್ರಂಪ್‌ ಹೊರಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !