ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಮತ್ತು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ಜ್ ಅವರು ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಈ ಎರಡೂ ಪ್ರತ್ಯೇಕ ಭೇಟಿಗಳು ಏಪ್ರಿಲ್ 21 ಮತ್ತು 25 ರ ನಡುವೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಭಾರತಕ್ಕೆ ಆಗಮಿಸುತ್ತಿದ್ದಾರೆ. ಟ್ರಂಪ್ ತೆರಿಗೆ ಸಮರ ಆರಂಭಿಸಿದ ಸಮಯದಲ್ಲೇ ಜೆಡಿ ವಾನ್ಸ್ ಭಾರತಕ್ಕೆ ಭೇಟಿ ನೀಡುತ್ತಿರುವುದು ಹಲವು ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.