ಭಾರತ-ಪಾಕ್‌ ಸಂಘರ್ಷಕ್ಕೂ ನಮಗೂ ಸಂಬಂಧ ಇಲ್ಲ, ಆದರೆ ಈ ರೀತಿ ಆಗಬಾರದು ಎಂದ ಅಮೆರಿಕ ಉಪಾಧ್ಯಕ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಮ್ ಉಗ್ರ ದಾಳಿ ಬಳಿಕ ಉಲ್ಬಣವಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ವಿಚಾರವಾಗಿ ಕಡ್ಡಿಮುರಿದಂತೆ ಉತ್ತರ ನೀಡಿರುವ ಅಮೆರಿಕ ಇದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದೆ.

ಈ ಬಗ್ಗೆ ಮಾತನಾಡಿರುವ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್, ‘ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ “ನಮಗೆ ಸಂಬಂಧವಿಲ್ಲ”. ಆದರೂ ನಾನು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡೂ ದೇಶಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರೋತ್ಸಾಹಿಸುತ್ತಿದ್ದೇವೆ ಎಂದು ಹೇಳಿದರು.

‘ಸ್ವಲ್ಪ ಮಟ್ಟಿಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರೋತ್ಸಾಹಿಸುವುದನ್ನು ನಾವು ಮಾಡಬಹುದಾಗಿದೆ. ಆದರೆ ನಾವು ಯುದ್ಧದ ಮಧ್ಯದಲ್ಲಿ ಭಾಗಿಯಾಗುವುದಿಲ್ಲ, ಅದು ಮೂಲಭೂತವಾಗಿ ನಮ್ಮ ವಿಷಯವಲ್ಲ.. ನಮಗೆ ಸಂಬಂಧಿಸಿದ್ದಲ್ಲ ಮತ್ತು ಅಮೆರಿಕದ ನಿಯಂತ್ರಣ ಸಾಮರ್ಥ್ಯದೊಂದಿಗೆ ಯಾವುದೇ ಸಂಬಂಧವಿಲ್ಲ’ ಎಂದು ಜೆ.ಡಿ.ವ್ಯಾನ್ಸ್‌ ಹೇಳಿದ್ದಾರೆ.

ಅಂತೆಯೇ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ವಿಶಾಲವಾದ ಪ್ರಾದೇಶಿಕ ಯುದ್ಧ ಎಂದು ಹೇಳಿದ ವ್ಯಾನ್ಸ್, ಇದು ಪರಮಾಣು ಸಂಘರ್ಷವಾಗಿ ಬದಲಾಗಬಾರದು ಎಂಬುದು ನಮ್ಮ ಆಶಯ ಮತ್ತು ನಿರೀಕ್ಷೆಯಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಸದ್ಯಕ್ಕೆ, ಅದು ಸಂಭವಿಸುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ. ‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!