26/11 ಅಪರಾಧಿಗಳನ್ನು ಶಿಕ್ಷಿಸಲು ಅಮೆರಿಕ ಭಾರತಕ್ಕೆ ನೆರವಾಗಲಿದೆ: ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮುಂಬೈ ದಾಳಿಯ ಅಪರಾಧಿಗಳನ್ನು ನ್ಯಾಯಾಲಯದ ಕಟಕಟೆಗೆ ತರಲು ಭಾರತದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಅಮೆರಿಕ ಹೇಳಿದೆ. ಮುಂಬೈ ಭಯೋತ್ಪಾದಕ ದಾಳಿಯ 14 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅಮೆರಿಕಾದಿಂದ ಈ ಹೇಳಿಕೆ ಹೊರಬಿದ್ದಿದೆ.
“ಆರು ಅಮೇರಿಕನ್ ನಾಗರಿಕರು ಸೇರಿದಂತೆ ಈ ಕ್ರೌರ್ಯದ ಕೃತ್ಯದಲ್ಲಿ ಪ್ರಾಣತೆತ್ತ ಬಲಿಪಶುಗಳ ಕುಟುಂಬಗಳು ಮತ್ತು ಸ್ನೇಹಿತರಿಗೆ ನಾವು ನಮ್ಮ ತೀವ್ರವಾದ ಸಂತಾಪವನ್ನು ವ್ಯಕ್ತಪಡಿಸುತ್ತೇವೆ” ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿದ್ದಾರೆ.
26/11 ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, “ಭಯೋತ್ಪಾದನೆ ಮಾನವೀಯತೆಗೆ ಬೆದರಿಕೆ ಹಾಕುತ್ತದೆ. 26/11 ರ ಬಲಿಪಶುಗಳನ್ನು ಸ್ಮರಿಸುವುದರಲ್ಲಿ ಜಗತ್ತು ಭಾರತವನ್ನು ಸೇರುತ್ತದೆ. ಈ ದಾಳಿಯನ್ನು ಯೋಜಿಸಿದ ಮತ್ತು ಮೇಲ್ವಿಚಾರಣೆ ಮಾಡಿದವರನ್ನು ನ್ಯಾಯಾಂಗಕ್ಕೆ ತಂದೇ ತರುತ್ತೇವೆ ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!