ಬ್ಯಾಂಕಿಂಗ್ ಸೌಲಭ್ಯಗಳನ್ನು ಬಳಸಿ ಸ್ವಂತ ಉದ್ಯೋಗ ಸ್ಥಾಪಿಸಿ: ಹೊಸ ಉದ್ಯಮಿಗಳಿಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಕರೆ

ಹೊಸದಿಗಂತ ವರದಿ ಚಿತ್ರದುರ್ಗ: ಉದ್ಯಮಶೀಲತೆಯ ಹಾದಿಯಲ್ಲಿ ಸಾಗುವ ಪ್ರತಿಯೊಬ್ಬ ಉದ್ಯಮಿಯೂ ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬ್ಯಾಂಕಿಂಗ್ ವ್ಯವಸ್ಥೆಯ ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಂಡು ಸ್ವಂತ ಉದ್ಯೋಗ ಸ್ಥಾಪಿಸುವುದರ ಜತೆಗೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ಪಿ. ಪ್ರವೀಣ್ ಸಲಹೆ ನೀಡಿದರು. ಇಲ್ಲಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಶುಕ್ರವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಧಾರವಾಡದ ಸಿಡಾಕ್ ಮತ್ತು ಚಿತ್ರದುರ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 10 ದಿನಗಳ ʼಉದ್ಯಮಶೀಲತಾ … Continue reading ಬ್ಯಾಂಕಿಂಗ್ ಸೌಲಭ್ಯಗಳನ್ನು ಬಳಸಿ ಸ್ವಂತ ಉದ್ಯೋಗ ಸ್ಥಾಪಿಸಿ: ಹೊಸ ಉದ್ಯಮಿಗಳಿಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಕರೆ