ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಇನ್ಮುಂದೆ ತಮಿಳುನಾಡಿನೊಂದಿಗೆ ಸಂವಹನ ನಡೆಸುವಾಗ ಇಂಗ್ಲಿಷ್ ಭಾಷೆಯನ್ನು ಅಧಿಕೃತವಾಗಿ ಬಳಸಬೇಕು ಎಂದು ಮದ್ರಾಸ್ ಹೈಕೋರ್ಟ್ನ ಮದುರೈ ಪೀಠ ಆದೇಶ ಹೊರಡಿಸಿದೆ.
“ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳೊಂದಿಗೆ ಸಂವಹನ ನಡೆಸಲು ಇಂಗ್ಲಿಷ್ ಭಾಷೆಯನ್ನೇ ಬಳಸಬೇಕು. ಹಿಂದಿಯನ್ನು ಬಳಸುವಂತಿಲ್ಲ” ಎಂದು ಹೈಕೋರ್ಟ್ನ ಪೀಠವು ಕಳೆದ ತಿಂಗಳು ಆದೇಶ ಹೊರಡಿಸಿದ್ದು, ಇದೀಗ ಈ ಆದೇಶದ ಪ್ರತಿಯನ್ನು ಬಹಿರಂಗ ಮಾಡಲಾಗಿದೆ.
ಮಧುರೈ ಲೋಕಸಭಾ ಕ್ಷೇತ್ರದ ಸಂಸದ ಸು. ವೆಂಕಟೇಶನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಹೀಗೆ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಎನ್. ಕಿರುಬಾಕರನ್ (ಪ್ರಸ್ತುತ ನಿವೃತ್ತರು) ಮತ್ತು ಎಂ. ದುರೈಸ್ವಾಮಿ ಅವರು, ಅಧಿಕೃತ ಭಾಷೆಗಳ ಕಾಯಿದೆ 1963 ಹಾಗೂ ಅಧಿಕೃತ ಭಾಷೆಗಳ ನಿಯಮಗಳ 1976ರ ಅನ್ವಯ ಕೇಂದ್ರ ಸರ್ಕಾರವು ನಡೆದುಕೊಳ್ಳಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.