ಹುಂಡಿ ಹಣವನ್ನು ಹಿಂದೂ ಧಾರ್ಮಿಕ ಆಚರಣೆಗೆ ಮಾತ್ರ ಬಳಸಿ: ಸಿಎಂ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ.

ಬಿಜೆಪಿ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ.

ದೇವಸ್ಥಾನದಲ್ಲಿನ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ ಮಾಡಲಾಗುತ್ತಿದೆ. ಇದನ್ನು ಹಿಂದುಯೇತರ ಸಮುದಾಯಗಳಿಗೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಹನ್ನೊಂದು ವರ್ಷಗಳ ಹಿಂದೆ ಕಾಯಿದೆ ಜಾರಿಗೆ ಬಂದಾಗಿನಿಂದ ದೇವಸ್ಥಾನದ ಹಣ ದೇವಸ್ಥಾನಕ್ಕೇ ಬಳಕೆಯಾಗುತ್ತಿದೆ. ಇದು ಮುಂದೆಯೂ ಹೀಗೆ ಇರಲಿದೆ. ಬೇರೆ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣ ಬಳಕೆ ಮಾಡಿಲ್ಲ. ಮಾಡುವುದೂ ಇಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!