ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ.