ಹೊಸದಿಗಂತ ವರದಿ,ಕಲಬುರಗಿ:
ರಾಜ್ಯಾದ್ಯಂತ ತೀವ್ರ ಸದ್ದು ಮಾಡಿದ್ದ ಪಿಎಸ್ಐ ಪರೀಕ್ಷಾ ಅಕ್ರಮ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಪರೀಕ್ಷೆಯಲ್ಲಿ ಅಕ್ರಮ ನಡೆದ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಕೆಇಎ ನಡೆಸುತ್ತಿರುವ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಎಫ್.ಡಿ.ಎ.ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಗ್ರಾಮದ ತ್ರಿಮೂರ್ತಿ ಅವರನ್ನು ಬಂಧನ ಮಾಡಲಾಗಿದೆ.
ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಪೋಲಿಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅಶೋಕ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.