Friday, June 2, 2023

Latest Posts

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಎರಡು ಪ್ರಕರಣದಲ್ಲಿ ಪೊಲೀಸರು ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಹಾಗೂ ಬಿಜೆಪಿ ಜಿಲ್ಲಾ ಸಂಚಾಲಕ ನಾಗೇಂದ್ರ ಆರ್‌.ಎಲ್.‌ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಏಪ್ರಿಲ್ 17 ರಂದು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪುಟ್ಟೃಂಗಶೆಟ್ಟಿ ನಾಮಪತ್ರ ಸಲ್ಲಿಸುವ ವೇಳೆ ಮೆರವಣಿಗೆ ನಡೆಸಲು ಪಿ.ಮರಿಸ್ವಾಮಿ ಅನುಮತಿ ಪಡೆದಿದ್ದರು. ಈ ಮೆರವಣಿಗೆಯಲ್ಲಿ ಅಪ್ರಾಪ್ತ ಮಕ್ಕಳನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು ಚಾಮರಾಜನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ‌ದಾಖಲಾಗಿದೆ.

ಈ ಕುರಿತು ಚಾಮರಾಜನಗರ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿ ಯೋಗಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!