ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣಗೆ ನೋಟಿಸ್

ಹೊಸದಿಗಂತ ವರದಿ, ಮಡಿಕೇರಿ:

ಚುನಾವಣಾ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಮಕ್ಕಳನ್ನು ಬಳಸಿಕೊಳ್ಳುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರಿಗೆ ಚುನಾವಣಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.
ಚುನಾವಣೆಗೆ ಸಂಬಂಧಿಸಿದ‌‌ ಪ್ರಚಾರ ಕಾರ್ಯಗಳಿಗೆ ರಾಜಕೀಯ ಪಕ್ಷಗಳು 14ರಿಂದ 18ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನ್ಯಾಯಾಲಯದ ಆದೇಶವಿದ್ದು, ಅದರಂತೆ ಈ ವಯಸ್ಸಿನ ಮಕ್ಕಳನ್ನು ಪ್ರಚಾರಕ್ಲೆ ಬಳಸುವುದನ್ನು ನಿಷೇಧಿಸಿ ಚುನಾವಣಾ ಆಯೋಗ ನಿಷೇಧಿಸಿದೆ.
ಆದರೆ ಮಂಗಳವಾರ ವೀರಾಜಪೇಟೆಯಲ್ಲಿ ನಡೆದ ಕಾಂಗ್ರೆಸ್’ನ ಮೆರವಣಿಗೆಯಲ್ಲಿ ಮಕ್ಕಳನ್ನು ಬಳಸಿಕೊಂಡಿರುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಆದುದರಿಂದ ನಿಮ್ಮ ಮೇಲೆ ಏಕೆ ನಿಯಾಮಾನುಸಾರ ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ 24 ಗಂಟೆಯೊಳಗಾಗಿ ನಿಮ್ಮ ಲಿಖಿತ ಸಮಜಾಯಿಷಿಯನ್ನು ಸಲ್ಲಿಸತಕ್ಕದ್ದು, ತಪ್ಪಿದ್ದಲ್ಲಿ ನಿಯಾಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನ ಶೇಖ್ ಅವರು ನೀಡಿರುವ ನೋಟೀಸ್’ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!