ಗ್ಯಾರೆಂಟಿಗೆ ದಲಿತ ಅಭಿವೃದ್ಧಿ ನಿಗಮ ಅನುದಾನ ಬಳಕೆ: ಸರ್ಕಾರದ ವಿರುದ್ಧ ಸಮರಕ್ಕೆ ಸಜ್ಜಾದ ಡಿಎಸ್‌ಎಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕಗ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ದಲಿತ ಅಭಿವೃದ್ಧಿ ನಿಗಮದ ಅನುದಾನ ಬಳಕೆ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ತೀವ್ರ ಪ್ರತಿಭಟನೆ ನಡೆಸುತ್ತಿರುವಂತೆಯೇ ಇದೀಗ ದಲಿತ ಸಂಘಟನೆಗಳೂ ಕೂಡ ಸಿದ್ದು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿವೆ.

ಹೌದು.. ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಬೇರೆಡೆಗೆ ತಿರುಗಿಸಿದ್ದಕ್ಕಾಗಿ ಸರ್ಕಾರದ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದ್ದು, ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ದಲಿತ ಸಂಘಟನೆಗಳ ಆಕ್ರೋಶ ಎದುರಿಸುವಂತಾಗಿದೆ.

ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿಗಳಿಗೆ ವಂಚಿಸಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ಅವರೊಂದಿಗೆ ನಡೆಯುತ್ತಿರುವ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಬಿಜೆಪಿ ಕೂಡ ವಿಧಾನಸೌಧದ ಹೊರಗೆ ಮತ್ತು ಒಳಗೆ ಈ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇದರ ನಡುವೆಯೇ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!