Sunday, February 5, 2023

Latest Posts

ಬಾಲಿವುಡ್ ನಟಿ ಐಶ್ವರ್ಯ ರೈ ಹೆಸರಿನಲ್ಲಿ ನಕಲಿ ಪಾಸ್‌ಪೋರ್ಟ್ ಬಳಕೆ: ವಿದೇಶಿಗರು ಅರೆಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಲಿವುಡ್ ನಟಿ ಐಶ್ವರ್ಯ ರೈ ಅವರ ಹೆಸರಿನಲ್ಲಿ ನಕಲಿ ಪಾಸ್‌ಪೋರ್ಟ್ ಬಳಕೆ ಮಾಡಿದ ಖದೀಮರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ಐಶ್ವರ್ಯಾ ರೈ ಹೆಸರಲ್ಲಿ ಕೆಲವರು ಆಧಾರ್ ಕಾರ್ಡ್ ಮಾಡಿಸಿದ್ದು ಸುದ್ದಿಯಾಗಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನಟಿ ಐಶ್ವರ್ಯಾ ರೈ ಹೆಸರಿನ ನಕಲಿ ಪಾಸ್‌ಪೋರ್ಟ್ ಅನ್ನೇ ಮಾಡಿಸಿದ್ದಾರೆ.

ಆದ್ರೆ ಇವರು ಭಾರತಿಯವರು ಅಲ್ಲ. ಬದಲಾಗಿ ವಿದೇಶಿಗರು. ಉತ್ತರ ಪ್ರದೇಶದ ಪೊಲೀಸರು ಇಬ್ಬರು ನೈಜೀರಿಯನ್ ಹಾಗು ಒಬ್ಬ ಘಾನಾದ ಪ್ರಜೆಗಳನ್ನು ಬಂಧಿಸಿದ್ದು ಅವರಿಂದ ನಟಿ ಐಶ್ವರ್ಯ ರೈ ಅವರ ನಕಲಿ ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಜೊತೆಗೆ ನಾಲ್ಕು ಕೋಟಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಗ್ರೇಟರ್ ನೊಯ್ಡಾನಲ್ಲಿ ವಾಸವಿದ್ದ ಈ ಮೂವರು ವಿವಿಧ ಸೈಬರ್ ಸಂಬಂಧಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಾಜಿ ಮಿಲಿಟರಿ ಅಧಿಕಾರಿಯೊಬ್ಬರಿಗೆ ಮೋಸ ಮಾಡಿ ಸುಮಾರು 1.81 ಕೋಟಿ ಹಣ ಲಪಟಾಯಿಸಿದ್ದರು. ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದು, ಭಾರಿ ಮೊತ್ತದ ಹಣದ ಜೊತೆಗೆ ಐಶ್ವರ್ಯಾ ರೈ ಹೆಸರಿನಲ್ಲಿರುವ ನಕಲಿ ಪಾಸ್‌ಪೋರ್ಟ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!