ಲೋಕಸಭಾ‌ ಸದಸ್ಯರ ನಿಧಿ ಬಳಕೆ: ಸಂಸದ ಪ್ರತಾಪ್ ಸಿಂಹ ಪ್ರಥಮ

ಹೊಸದಿಗಂತ ವರದಿ, ಮಡಿಕೇರಿ:

ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆಯಲ್ಲಿ ಮೈಸೂರು-ಕೊಡಗು ಲೊಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಈ ಬಾರಿಯೂ ಪ್ರಥಮ ಸ್ಥಾನ ಗಳಿಸಿದ್ದಾರೆ.
ಪ್ರದೇಶಾಭಿವೃದ್ಧಿ ನಿಧಿಯಡಿ 12.14 ಕೋಟಿ ರೂ. ಬಿಡುಗಡೆಯಾಗಿದ್ದು, ಈ ಪೈಕಿ ರೂ.11.87 ಕೋಟಿ ವೆಚ್ಚದ ಕಾಮಗಾರಿಗಳನ್ನು ಶಿಫಾರಸ್ಸು ಮಾಡಿದ್ದರು. ರೂ.11.74 ಕೋಟಿ ವೆಚ್ಚವಾಗಿದ್ದು, ರೂ.40 ಲಕ್ಷ ಮಾತ್ರ ಉಳಿಕೆಯಾಗಿದೆ. ಪ್ರತಾಪ್ ಸಿಂಹ ಅವರ ಅನುದಾನ ಬಳಕೆ ಪ್ರಮಾಣ ಶೇ.121.60 ರಷ್ಟಿದ್ದು, ಆ ಮೂಲಕ ಸರ್ಕಾರದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇವರು ಕೋವಿಡ್ ಪೂರ್ವದಲ್ಲೂ ಅನುದಾನ ಬಳಕೆಯಲ್ಲಿ ಪ್ರಥಮ ಸ್ಥಾನದಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!