ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ರಾಜ್ಯ ಸರಕಾರ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ ಪ್ರಸ್ತಾಪಿಸಿ ಪತ್ರವನ್ನು ಬರೆಯಲಾಗಿದೆ. ಈ ಬಗ್ಗೆ ವೇದಿಕೆ ಮೇಲೆ ಅಳವಡಿಸಲಾಗುವ ಪರದೆಗಳಲ್ಲಿ ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡುವಂತೆ ಕೋರಿದೆ ಎಂದಿದ್ದಾರೆ.
ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು. ಈ ಹಿನ್ನಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆ ಅನ್ವಯ ಇನ್ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!