ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌ ಹಾಡು ಬಳಕೆ: ಕಾಂಗ್ರೆಸ್‌ ಟ್ವಿಟ್ಟರ್‌ ಖಾತೆ ಬ್ಲಾಕ್‌ ಮಾಡುವಂತೆ ಕೋರ್ಟ್‌ ಆದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ್‌ ಜೋಡೋ ಯಾತ್ರೆಯಲ್ಲಿ ಕೆಜಿಎಫ್‌ ಚಾಪ್ಟರ್‌-2 ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷ ಮೇಲೆ ಬೆಂಗಳೂರು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ತನ್ನ ಅನುಮತಿಯಿಲ್ಲದೆ, ಭಾರತ್‌ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್‌ ಪಕ್ಷ ಕೆಜಿಎಫ್‌ ಚಾಪ್ಟರ್‌-2 ಚಿತ್ರದ ಹಾಡುಗಳನ್ನು ಬಳಸಿಕೊಂಡಿದೆ. ಇದು ನನ್ನ ಶಾಸನಬದ್ಧ ಹಕ್ಕುಸ್ವಾಮ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಎಂಆರ್‌ಟಿ ಮ್ಯೂಸಿಕ್‌ ದೂರು ನೀಡಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಜೈರಾಮ್‌ ರಮೇಶ್‌ ಹಾಗೂ ಸುಪ್ರಿಯಾ ಶಿರ್ನಾಟೆ ವಿರುದ್ಧ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿತ್ತು.

ಇದರ ವಿಚಾರಣೆ ನಡೆಸಿದ ಕೋರ್ಟ್, ಎಂಆರ್‌ಟಿ ಮ್ಯೂಸಿಕ್‌ ಮಾಲೀಕತ್ವದ ಹಕ್ಕುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಕಾಂಗ್ರೆಸ್‌ ಪಕ್ಷ ಹಾಗೂ ಭಾರತ್‌ ಜೋಡೋ ಯಾತ್ರೆಯ ಟ್ವಿಟರ್‌ ಹ್ಯಾಂಡಲ್‌ಅನ್ನು ತಾತ್ಕಾಲಿಕವಾಗಿ ಬ್ಲಾಕ್‌ ಮಾಡುವಂತೆ ಕೋರ್ಟ್‌ ಸೋಮವಾರ ಆದೇಶ ನೀಡಿದೆ.

ಧ್ವನಿ ದಾಖಲೆಗಳ ಆಪಾದಿತ ಅಕ್ರಮ ಬಳಕೆಯನ್ನು ಪ್ರೋತ್ಸಾಹಿಸಿದರೆ, ದೂರುದಾರರಾಗಿರುವ ಎಂಆರ್‌ಟಿ ಮ್ಯೂಸಿಕ್‌ಗೆ ದೊಡ್ಡ ನಷ್ಟವನ್ನು ಅನುಭವಿಸುತ್ತಾನೆ ಮತ್ತು ಇದು ಕಳ್ಳತನವನ್ನು ದೊಡ್ಡ ಪ್ರಮಾಣದಲ್ಲಿ ಪ್ರೋತ್ಸಾಹಿಸಲು ಕಾರಣವಾಗುತ್ತದೆ ಎನ್ನುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ ಎಂದು ಕೋರ್ಟ್‌ ಹೇಳಿದೆ.

ಎಂಆರ್‌ಟಿ ಮ್ಯೂಸಿಕ್‌, ನಿರ್ದಿಷ್ಟವಾಗಿ ಅಕ್ರಮವಾಗಿರುವ ಪ್ರತಿ ಅಂಶಗಳನ್ನು ಒಳಗೊಂಡಿರುವ ಸಿಡಿ ತೋರಿಸಿದ್ದಾರೆ. ಅಕ್ರಮವಾಗಿ ಮೂಲ ಆವೃತ್ತಿಯ ಹಾಡನ್ನು ತಮ್ಮದೇ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಇದನ್ನು ಸರಿಪಡಿಸಲೇ ಇದ್ದಲ್ಲಿ, ಮುಂದೆ ಪೈರಸಿಯನ್ನು ದೊಡ್ಡ ಪ್ರಮಾಣದಲ್ಲಿ ಉತ್ತೇಜಿಸಲು ಕಾರಣವಾಗುತ್ತದೆ,ಎಂದು ಕೋರ್ಟ್ ಹೇಳಿದೆ.

ಮುಂದಿನ ವಿಚಾರಣೆಯ ದಿನಾಂಕದವರೆಗೆ ಕೆಜಿಎಫ್‌ ಚಾಪ್ಟರ್‌-2 ಹಾಡಿನ ಮಾಲೀಕತ್ವದ ಹಕ್ಕುಸ್ವಾಮ್ಯದ ಕೆಲಸವನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಎಂದು ಆದೇಶ ನೀಡಿದೆ. ಅದರೊಂದಿಗೆ ಟ್ವಿಟರ್‌ಗೆ ತನ್ನ ಪ್ಲಾಟ್‌ಫಾರ್ಮ್‌ನಿಂದ ಮೂರು ಲಿಂಕ್‌ಗಳನ್ನು ತೆಗೆದುಹಾಕುವಂತೆ ಅದು ನಿರ್ದೇಶಿಸಿದೆ ಮತ್ತು ಐಎನ್‌ಸಿ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಹ್ಯಾಂಡಲ್‌ಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಆದೇಶ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!