August 17, 2026
Monday, August 17, 2026
spot_img

NEET ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ: ಪೊಲೀಸ್ ನಿಯಮಗಳಿಗೆ ಸುಪ್ರೀಂ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ (NEET) ಪರೀಕ್ಷಾ ಅಕ್ರಮ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದೆ. ಹಾಲಿ ಇರುವ ಪೊಲೀಸ್ ನಿಯಮಾವಳಿಗಳನ್ನು ಅಸಂವಿಧಾನಿಕ ಎಂದು ರದ್ದುಗೊಳಿಸದ ಹೊರತು, ಪೆಲೆಟ್ ಗನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಪೋಲಿಸ್ ನಿಯಮಗಳು ಮತ್ತು ಚೌಕಟ್ಟು

ಮುಖ್ಯ ನ್ಯಾಯಮೂರ್ತಿ ಸುರ್ಯ ಕಾಂತ್ ನೇತೃತ್ವದ ಪೀಠವು, ಅಸಾಧಾರಣ ಹಾಗೂ ತುರ್ತು ಪರಿಸ್ಥಿತಿಗಳಲ್ಲಿ ಹಂತ ಹಂತದ ಭದ್ರತಾ ಕ್ರಮವಾಗಿ ಪೆಲೆಟ್ ಗನ್ ಬಳಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದೆ. ಪೊಲೀಸ್ ಮಾರ್ಗಸೂಚಿಗಳು ಜಾರಿಯಲ್ಲಿರುವವರೆಗೆ ಅವುಗಳ ಬಳಕೆಯನ್ನು ನೇರವಾಗಿ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ ನ್ಯಾಯಪೀಠ, ಈ ಕುರಿತು ಪ್ರೋಟೋಕಾಲ್ ಸವಾಲು ಮಾಡಲು ಅರ್ಜಿದಾರರಿಗೆ ಸೂಚಿಸಿದೆ.

ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ಆದೇಶ

ಜುಲೈ 20ರ ಪ್ರತಿಭಟನೆ ವೇಳೆ ಪೆಲೆಟ್ ಗನ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ತಕ್ಷಣವೇ ಸೂಕ್ತ ವೈದ್ಯಕೀಯ ಸೇವೆ ಒದಗಿಸಬೇಕೆಂದು ಕೋರ್ಟ್ ನಿರ್ದೇಶಿಸಿದೆ. ಅಲ್ಲದೆ, ಅಂದು ನಿಯೋಜನೆಗೊಂಡಿದ್ದ ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ಪಡೆ ಬಳಸಿರುವ ಮದ್ದುಗುಂಡುಗಳ ಸಂಪೂರ್ಣ ದಾಖಲೆಗಳನ್ನು ಸುರಕ್ಷಿತವಾಗಿ ಕಾಯ್ದಿರಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !