2 ಸ್ಫೋಟಗಳಲ್ಲೂ ಒಂದೇ ಮಾದರಿಯ ವಸ್ತುಗಳ ಬಳಕೆ: ರಾಮೇಶ್ವರಂ ಕೆಫೆ, ಕುಕ್ಕರ್ ಬ್ಲಾಸ್ಟ್ ಗೂ ಇದ್ಯಾ ಲಿಂಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮೇಶ್ವರಂನ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಈ ಘಟನೆಯ ಬಗ್ಗೆ ಮಾಹಿತಿಯ ಮಹಾಪೂರವೇ ಹರಿದುಬರುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸ್ಫೋಟಕ್ಕೂ ಹಿಂದಿನ ಸ್ಫೋಟಗಳಿಗೂ ಸಾಮ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ನಡೆದ ಸ್ಫೋಟಗಳಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಇರುವ ಸಾಮ್ಯತೆಗಳ ಕುರಿತು ಪೊಲೀಸರು ತನಿಖೆ ನಡೆಸಿದ್ದು, ಮಂಗಳೂರು ಕುಕ್ಕರ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಕಂಡುಬಂದಿದೆ. ಕುಕ್ಕರ್ ಬಾಂಬ್ ಸ್ಫೋಟಕ್ಕೆ ಬಳಸಲಾದ ಸ್ಫೋಟಕಗಳನ್ನು ರಾಮೇಶ್ವರಂ ಕೆಫೆ ಸ್ಫೋಟದಲ್ಲೂ ಬಳಸಲಾಗಿದೆ.

ಎರಡೂ ಕಡೆ ನಡೆದ ಸ್ಫೋಟದ ವೇಳೆ ಹೊರಸೂಸಿರುವ ಹೊಗೆ ಒಂದೇ ಮಾದರಿಯಲ್ಲಿದೆ. ಒಂದೇ ರೀತಿಯ ವಸ್ತುಗಳನ್ನು ಬಳಸಲಾಗಿದೆ. ಬ್ಯಾಟರಿ, ಡಿಟೊನೇಟರ್​​ಗಳು, ನಟ್ಟು, ಬೋಲ್ಟ್ ಎರಡೂ ಸ್ಫೋಟಗಳಲ್ಲಿ ಬಳಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗಂಭೀರ ತನಿಖೆ ನಡೆಸಲು ನಿರ್ಧರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!