ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್ ಮಂಡನೆ ಮಾಡುತ್ತಿದ್ದು, ಟಿಡಿಎಸ್ ಘೋಷಣೆಗಳು ಹೀಗಿವೆ..
ಹಿರಿಯ ನಾಗರಿಕರಿಗೆ ಬಡ್ಡಿಯ ಮೇಲಿನ ತೆರಿಗೆ ಕಡಿತದ ಮಿತಿಯನ್ನು 50,000 ರೂ.ನಿಂದ 1,00,000 ರೂ.ಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ,
ಬಾಡಿಗೆಯ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನು 2.40 ಲಕ್ಷ ರೂ. ನಿಂದ 6 ಲಕ್ಷ ರೂ.ಗೆ ಏರಿಕೆ. ಇದರಿಂದ ಸಣ್ಣ ಪಾವತಿಗಳನ್ನು ಪಡೆಯುವ ಸಣ್ಣ ತೆರಿಗೆದಾರರಿಗೆ ಪ್ರಯೋಜನವಾಗಲಿದೆ.
ಆರ್‌ಬಿಐನ ಉದಾರೀಕೃತ ರವಾನೆ ಯೋಜನೆ (ಎಲ್‌ಆರ್‌ಎಸ್) ಅಡಿಯಲ್ಲಿ ಹಣ ರವಾನೆಗಳ ಮೇಲೆ ಮೂಲದಲ್ಲಿ ಸಂಗ್ರಹಿಸಿದ ತೆರಿಗೆ (ಟಿಸಿಎಸ್) ಸಂಗ್ರಹಿಸುವ ಮಿತಿಯನ್ನು ರೂ. 7 ಲಕ್ಷದಿಂದ ರೂ. 10 ಲಕ್ಷ ರೂ.ಗೆ ಏರಿಕೆಯಾಗಿದೆ.