ಮೇಲ್ಮನೆಯಲ್ಲಿ ‘ಉಷೆ’: ರಾಜ್ಯಸಭಾ ಸದಸ್ಯೆಯಾಗಿ ಅಪ್ರತಿಮ ಕ್ರೀಡಾಪಟು ಪ್ರಮಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಸದಸ್ಯೆಯಾಗಿ ಭಾರತದ ಪ್ರಖ್ಯಾತ ಕ್ರೀಡಾಪಟು ಪಿಟಿ ಉಷಾ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಹಳ್ಳಿಯಲ್ಲಿ ಜನಿಸಿದ ಉಷಾ, ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.  ವಿಶ್ವ ಜೂನಿಯರ್ ಇನ್ವಿಟೇಶನಲ್ ಮೀಟ್, ಏಷ್ಯನ್ ಚಾಂಪಿಯನ್‌ಶಿಪ್ ಗಳು ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಪದಕಗಳನ್ನು ಗೆದ್ದಿರುವ ಇವರು ಪಯ್ಯೋಲಿ ಎಕ್ಸ್‌ಪ್ರೆಸ್ ಎಂದೂ ಖ್ಯಾತರು.
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಖ್ಯಾತ ಸಂಯೋಜಕ ಇಳಯರಾಜ, ಚಿತ್ರಕಥೆಗಾರ ವಿ. ವಿಜಯೇಂದ್ರ ಪ್ರಸಾದ್ ಜೊತೆ ಇವರು ಮೇಲ್ಮನೆಗೆ ನಾಮ ನಿರ್ದೇಶನಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!