ವರಾಹ ರೂಪಂ ಹಾಡು ಬಳಸಿ…ಆದರೆ: ‘ಕಾಂತರ’ಕ್ಕೆ ತೈಕ್ಕುಡಂ ಬ್ರಿಡ್ಜ್​ ತಂಡ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಡೀ ವಿಶ್ವದಲ್ಲಿ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡುತ್ತಿದೆ.

ಇದರ ನಡುವೆ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿಗೆ ವಿವಾದ ಸುತ್ತಿಕೊಂಡಿತ್ತು. ಆದರೂ ಜನರು ಸಿನಿಮಾ ನೋಡಲು ಹಿಂದೇಟು ಹಾಕಲಿಲ್ಲ.

ಈ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದಕಾಪಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿತ್ತು.ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿತ್ತು. ಇದೀಗ ವರಾಹ ರೂಪಂ ಹಾಡಿನ ವಿವಾದದ ಕುರಿತಂತೆ ಖುದ್ದು ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ತಂಡ ಪ್ರತಿಕ್ರಿಯೆ ನೀಡಿದೆ.

ತೈಕ್ಕುಡಂ ಬ್ರಿಡ್ಜ್​’ ತಂಡದ ವಿಯಾನ್ ಫರ್ನಾಂಡಿಸ್ ಪ್ರತಿಕ್ರಿಯೆ ನೀಡಿದ್ದು, ಈ ಸಿನಿಮಾದಲ್ಲಿ ನಮ್ಮ ಹಾಡಿಗೆ ಕ್ರೆಡಿಟ್ ಕೊಟ್ಟರೆ, ಈ ಹಾಡು ಬಳಸಲು ತೊಂದರೆಯಿಲ್ಲ ಎಂದಿದ್ದಾರೆ.

ಕೇರಳದ ಕೋಝಿಕೋಡ್‌ ಸೆಷನ್ಸ್‌ ಕೋರ್ಟ್​ನ ಆದೇಶದ ಪ್ರತಿ ಕೈ ಸೇರಿದ ನಂತರದಲ್ಲಿ ಕಾಂತಾರ ತಂಡದವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ. ನಮಗೆ ಕ್ರೆಡಿಟ್ ಕೊಟ್ಟರೆ ಈ ಹಾಡನ್ನು ಅವರು ಪ್ಲೇ ಮಾಡಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ವಿಯಾನ್ ಫರ್ನಾಂಡಿಸ್ ಹೇಳಿದ್ದಾರೆ.

ಸಿನಿಮಾಗಳಲ್ಲಿ ಕೆಲವು ಹಾಡುಗಳ ಮಧ್ಯೆ ಹೋಲಿಕೆ ಇರುತ್ತದೆ. ಅದು ಸಾಮಾನ್ಯ. ಹೀಗಾಗಿ, ಆರಂಭದಲ್ಲಿ ಈ ವಿಚಾರದಲ್ಲಿ ಅಷ್ಟಾಗಿ ತಲೆಕೆಡಿಸಿಕೊಳ್ಳಲಿಲ್ಲ. ಆದರೆ, ಕಾಮೆಂಟ್​ಗಳು, ಮೆಸೇಜ್​ಗಳು, ದೂರವಾಣಿ ಕರೆಗಳು ನಮಗೆ ಬರುತ್ತಲೇ ಇದ್ದೆವು. ಬಳಿಕ ಪರಿಶೀಲನೆ ಮಾಡಿದಾಗ ಅದು ನಿಜವಾಗಿತ್ತು. ಹೀಗಾಗಿ ಕಾಂತಾರ ಸಿನಿಮಾದ ಮೇಲೆ ಕೇಸ್ ಹಾಕಿದೆವು. ಇನ್ನು ಯೂಟ್ಯೂಬ್ ಚಾನೆಲ್​​ನಲ್ಲಿ ‘ವರಾಹ ರೂಪಂ..’ ಹಾಡಿಗೆ ಬಂದ ಅನೇಕ ಕಾಮೆಂಟ್​ಗಳನ್ನು ಡಿಲೀಟ್ ಮಾಡಲಾಗಿದೆ ಅಂತಲೂ ವಿಯಾನ್ ಆರೋಪಿಸಿದ್ದಾರೆ.

ಕಾಂತಾರ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಅಜನೀಶ್ ಲೋಕನಾಥ್ ಅವರು ನಮ್ಮ ಬ್ಯಾಂಡ್​ನ ಸ್ಥಾಪಕರಲ್ಲೊಬ್ಬರಾದ ಗೋವಿಂದ್ ವಸಂತ್ ಅವರನ್ನು ಸಂಪರ್ಕಿಸಿದ್ದರು. ನಮ್ಮ ಮ್ಯಾನೇಜ್​ಮೆಂಟ್ ನವರು ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದೆ. ಈ ಚಿತ್ರ ರಿಲೀಸ್​ಗೂ ಮೊದಲು ಅವರು ನಮ್ಮ ಜತೆ ಮಾತನಾಡಿ, ಹಾಡಿನಲ್ಲಿ ನಮ್ಮ ಬ್ಯಾಂಡ್​ನ ಉಲ್ಲೇಖ ಮಾಡಿದ್ದರೆ ಸಮಸ್ಯೆಯೇ ಆಗುತ್ತಿರಲಿಲ್ಲ. ಅಲ್ಲದೇ ನಾವು ಕೋರ್ಟ್‌ ಕೇಸ್ ಸಹ ಹಾಕುತ್ತಿರಲಿಲ್ಲ ಎಂದಿದ್ದಾರೆ.

ನಮ್ಮದು ಸ್ವತಂತ್ರ ಬ್ಯಾಂಡ್ ದೊಡ್ಡ ನಿರ್ಮಾಣ ಸಂಸ್ಥೆಯೊಂದಿಗೆ ಹೋರಾಡುತ್ತಿರುವುದು ಇದೇ ಮೊದಲು. ತಮ್ಮಲ್ಲಿರುವ ಅಧಿಕಾರ ಮತ್ತು ಹಣದಿಂದ ಅವರು ಅದರಿಂದ ಪಾರಾಗಬಹುದು ಎಂದು ಅವರು ಭಾವಿಸುತ್ತಾರೆ.ಯಾವುದೇ ನಿರ್ಧಾರವಾಗಲಿ, ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಹೆಜ್ಜೆ ಹಿಂದಕ್ಕೆ ಇಡುವ ಪ್ರಶ್ನೆಯೇ ಇಲ್ಲ. ಹೀಗಾಗಿ ಮುಂದೆ ಹೆಜ್ಜೆ ಹಾಕಿದ್ದೇವೆ ಎಂಬ ತೃಪ್ತಿ ನಮಗಿರುತ್ತದೆ ಅಂತ ವಿಯಾನ್ ಫರ್ನಾಂಡಿಸ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!