Friday, December 9, 2022

Latest Posts

ಶಂಷಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಚಿನ್ನ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಂಷಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಸಿಕ್ಕಿದೆ. ದುಬೈನಿಂದ ಹೈದರಾಬಾದ್‌ಗೆ ಆಗಮಿಸಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಈ ವೇಳೆ ಮೂವರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೆಜಿ ಚಿನ್ನಾಭರಣ ಪತ್ತೆಯಾಗಿದೆ.

ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡು ಪ್ರಯಾಣಿಕರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಬಾರ್‌ಗಳ ರೂಪದಲ್ಲಿ ಚಿನ್ನವನ್ನು ಸಾಗಿಸಲಾಗುತ್ತಿದ್ದು, ಇದರ ಮೌಲ್ಯ 3.50 ಕೋಟಿ ರೂ.ಗೂ ಹೆಚ್ಚು ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!