ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಯಾರು ಎನ್ನುವ ಪ್ರಶ್ನೆಗೆ ಕಡೆಗೂ ಉತ್ತರ ದೊರಕಿದ್ದು, ಯು.ಟಿ. ಖಾದರ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ ಎನ್ನಲಾಗಿದೆ.
ಆರ್.ವಿ. ದೇಶಪಾಂಡೆ ಅಥವಾ ಟಿ.ಬಿ. ಜಯಚಂದ್ರ ಹಾಗೂ ಎಚ್.ಕೆ. ಪಾಟೀಲ್ ಇವರಲ್ಲಿ ಒಬ್ಬರು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಆಗುತ್ತಾರೆ ಎನ್ನಲಾಗಿತ್ತು. ಆದರೆ ಅಚ್ಚರಿಯ ಆಯ್ಕೆಯಂತೆ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆರಿಸಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಯು.ಟಿ ಖಾದರ್‌ಗೆ ಕರೆ ಮಾಡಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಮನವಿ ಮಾಡಿದ್ದಾರೆ. ನಂತರ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದು, ಬಹುತೇಕ ಫೈನಲ್ ಆಗಿದೆ ಎನ್ನಲಾಗಿದೆ. ಇಂದು ವಿಧಾನಸಭೆಯಲ್ಲಿ ಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ. ಖಾದರ್ ನಾಮಪತ್ರ ಸಲ್ಲಿಸಿದ್ದು, ಅವಿರೋಧ ಆಯ್ಕೆ ಸಾಧ್ಯತೆಗಳಿವೆ.