April 2, 2026
Thursday, April 2, 2026
spot_img

ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್, ಗ್ಯಾಸ್ ಸಿಲಿಂಡರ್ ಪೂರೈಕೆ: ಅಧಿಕಾರಿಗಳಿಗೆ ಯು.ಟಿ.ಖಾದರ್ ಕಟ್ಟುನಿಟ್ಟಿನ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:


ಮಂಗಳೂರು ಹಳೆಯ ಬಂದರಿನಿಂದ ಮೀನುಗಾರಿಕೆಗೆ ತೆರಳುವ ಬೋಟ್‌ಗಳಿಗೆ ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್‌ಗಳನ್ನು ನಿರಂತರವಾಗಿ ಒದಗಿಸಲು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರಿಕಾ ಸಂಘಟನೆಗಳು, ಬೋಟ್ ಮಾಲೀಕರು, ತೈಲ ಕಂಪನಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇಂಧನ ಕೊರತೆಯಿಂದ ಮೀನುಗಾರಿಕೆ ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.


ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದ ಮೀನುಗಾರಿಕಾ ಚಟುವಟಿಕೆಗಳಿಗೆ ಭಾರಿ ಹೊಡೆತ ಬಿದ್ದಿದೆ ಎಂದು ಮೀನುಗಾರ ಮುಖಂಡರು ಸಭೆಯ ಗಮನ ಸೆಳೆದರು.


ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸಭಾಧ್ಯಕ್ಷರು, ಹಳೆಯ ಬಂದರಿನಲ್ಲಿ ಸ್ಥಗಿತಗೊಂಡಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಡೀಸೆಲ್ ಔಟ್‌ಲೆಟ್ ಅನ್ನು ತಕ್ಷಣವೇ ಪುನಾರಂಭಿಸಲು ನಿರ್ದೇಶನ ನೀಡಿದರು. ಅಲ್ಲದೆ, ಪ್ರತಿ ಬೋಟ್‌ಗೆ ಕನಿಷ್ಠ ಒಂದು ಎಲ್‌ಪಿಜಿ ಸಿಲಿಂಡರ್ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !