ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರೆಂಟಿ ಶಕ್ತಿ ಯೋಜನೆಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆ ಆರಂಭವಾದ ದಿನದಿಂದ ಇಲ್ಲಿಯವರೆಗೆ ಒಟ್ಟಾರೆ 16 ಕೋಟಿಗೂ ಹೆಚ್ಚು ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ.
ಜೂನ್ 11 ರಿಂದ ಜುಲೈ 9ರವರೆಗೆ ಒಟ್ಟಾರೆ 16 ಕೋಟಿಗೂ ಹೆಚ್ಚು ಮಂದಿ ಶಕ್ತಿ ಯೋಜನೆ ಲಾಭ ಪಡೆದಿದ್ದಾರೆ, ಈ ಟಿಕೆಟ್ ಮೌಲ್ಯ 382 ಕೋಟಿ ರೂಪಾಯಿಗಳಾಗಿದೆ. ದಿನವೂ ಒಟ್ಟಾರೆ 28 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಬಿಎಂಟಿಸಿಯಲ್ಲಿ ಓಡಾಡುತ್ತಾರೆ. ಇದರಲ್ಲಿ ಅರ್ಧಕ್ಕೂ ಹೆಚ್ಚು ಮಂದಿ ಮಹಿಳೆಯರೇ ಆಗಿದ್ದಾರೆ.