ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಗ್ರಾಮವೊಂದರಲ್ಲಿ ವ್ಯಕ್ತಿಯೊಬ್ಬ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ವರದಿಗಳ ಪ್ರಕಾರ, ಜಿಲ್ಲೆಯ ಜಮೋ ಪ್ರದೇಶದ ಹಳ್ಳಿಯಲ್ಲಿ ಅಕ್ಟೋಬರ್ 3 ರಂದು ಘಟನೆ ನಡೆದಿದ್ದು, ಬಾಲಕಿ ಹೊರಗೆ ತೆರಳಿದ್ದಾಗ ಆರೋಪಿ ಹಿಂಬಾಲಿಸಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಈ ಸಂಬಂಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ಅಖಿಲೇಶ್ ಗುಪ್ತಾ ತಿಳಿಸಿದ್ದಾರೆ. ಆರೋಪಿಯನ್ನು ಮೋನು ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!