ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಪ್ರದೇಶದ ರಾಂಪುರ ಬಳಿ ನಡೆದ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಪೈಕಿ 5 ಮಂದಿ ಮೃತಪಟ್ಟಿದ್ದು, ಓರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ವರ್‌ ನಗರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕೂಡಲೇ ಸ್ಥಳಕ್ಕೆ ದಾವಿಸಿದ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!