ಉತ್ತರ ಪ್ರದೇಶದಲ್ಲಿ ಇಂದು ಕೊನೆಯ ಹಂತದ ಮತದಾನ, 613 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ ಚುನಾವಣೆಯ ಕೊನೆಯ ಹಾಗೂ 7ನೇ ಹಂತದ ಮತದಾನ ಇಂದು ನಡೆಯಲಿದೆ.
ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಲೋಕಸಭಾ ಕ್ಷೇತ್ರದ ವಾಪ್ತಿಯಲ್ಲಿ ಬರುವ ಕ್ಷೇತ್ರಗಳೂ ಸೇರಿದಂತೆ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮತದಾರರು 613 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಅಜಂಗಡ, ಜಾನ್‌ ಪುರ, ಮೌ, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ, ಸೋನಭದ್ರಾ ಜಿಲ್ಲೆಗಳಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಸಂಜೆ ಆರರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮಾರ್ಚ್‌ 10 ರಂದು ಮತ ಎಣಿಕೆ ನಡೆಯಲಿದೆ. 2017ರಲ್ಲಿ ನಡೆದ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಈ ಭಾಗದ 54 ಕ್ಷೇತ್ರಗಳಲ್ಲಿ29 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದ್ದವು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!