ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ: ಮೊದಲ ಹಂತದಲ್ಲಿ 57.79% ಮತದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯಿತು. ಸಂಜೆ 5 ಗಂಟೆಯವರೆಗೆ ಶೇ.57.79 ರಷ್ಟು ಮತ ಚಲಾಯಿಸಿದ್ದಾರೆ.
ಇಂದು ಬೆಳಗ್ಗೆ 7 ಗಂಟೆಗೆ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿತ್ತು.ಮೊದಲ ಹಂತದಲ್ಲಿ 623 ಅಭ್ಯರ್ಥಿಗಳು ಕಣದಲ್ಲಿದ್ದು, ಈ ಹಂತದಲ್ಲಿ ಸುಮಾರು 2.27 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದರು. ಆದರೆ ಕೇವಲ ಶೇ.57.79 ರಷ್ಟು ಮತದಾನವಾಗಿದೆ.
ಲೋನಿ ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ ಶೇ.57.60 ರಷ್ಟು ವೋಟಿಂಗ್​ ಆಗಿದೆ.
ಫೆಬ್ರವರಿ 10 ರಿಂದ ಮಾರ್ಚ್ 7ರ ವರೆಗೆ ಏಳು ಹಂತಗಳಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್​ 10 ರಂದು ಮತ ಎಣಿಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!