ಯುಪಿ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್, ಗೋರಖ್‌ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಈ ಬಗ್ಗೆ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದು, ಮೊದಲ ಹಂತಕ್ಕೆ 58 ಸ್ಥಾನಗಳ ಪೈಕಿ 57 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಎರಡನೇ ಹಂತಕ್ಕಾಗಿ 55  ಸ್ಥಾನಗಳಿದ್ದು, 47 ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದಿದ್ದಾರೆ. ಸಿಎಂ ಯೋಗಿ ಆದಿತ್ಯಾನಾಥ್ ಅಯೋಧ್ಯೆಯಿಂದ ಸ್ಪರ್ಧಿಸುವ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆದರೆ ಇದೀಗ ಗೋರಖ್‌ಪುರದಿಂದ ಆದಿತ್ಯನಾಥ್ ಅವರನ್ನು ಪಕ್ಷ ಕಣಕ್ಕಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!