ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ವಿಧಾನ ಸಭೆಯ ಚುನಾವಣೆಯ ಭಾಗವಾಗಿ ಇಂದು 6ನೇ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು, 57 ಕ್ಷೇತ್ರಗಳಲ್ಲಿ ಶೇ. 55.8ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಪರ್ಧಿಸಿದ್ದ ಗೋರಖ್ಪುರ್ ಕ್ಷೇತ್ರ ಸೇರಿದಂತೆ 57 ಕ್ಷೇತ್ರಗಳಿಗೆ ಮತ ಚಲಾವಣೆಯಾಗಿದೆ.ಒಟ್ಟು 2.14 ಕೋಟಿ ಮತದಾರರು ಇಂದು ಅಭ್ಯರ್ಥಿಗಳ ಭವಿಷ್ಯ ಬರೆದಿದ್ದಾರೆ.
ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದೆ.