ಉತ್ತರ ಪ್ರದೇಶದ ಚುನಾವಣೆ: ನಾಮಪತ್ರ ಸಲ್ಲಿಕೆ ಮಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಚುನಾವಣಾ ಕಣ ರಂಗೇರುತ್ತಿದ್ದು, ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ​ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಉತ್ತರ ಪ್ರದೇಶದ ಗೋರಖ್​ಪುರ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಿರುವ ಯೋಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಮೊದಲ ಸಲ ವಿಧಾನಸಭೆ ಚುನಾವಣಾ ಪರೀಕ್ಷಾ ಕಣಕ್ಕಿಳಿದಿದ್ದಾರೆ. ಯೋಗಿ ಆದಿತ್ಯನಾಥ್​ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ಸಹ ಸಾಥ್ ನೀಡಿದರು.
ಈ ಹಿಂದೆ ಗೋರಖ್​ಪುರ ಸಂಸದೀಯ ಕ್ಷೇತ್ರದಿಂದ ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಯೋಗಿ, ಇದೇ ಮೊದಲ ಸಲ ಶಾಸಕ ಸ್ಥಾನಕ್ಕಾಗಿ ಸ್ಪರ್ಧೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ ಮಾಡುವ ಮುನ್ನಗೋರಖನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಿದ ಅವರು, ಹೋಮ-ಹವನದಲ್ಲಿ ಭಾಗಿಯಾದರು.
ಗೋರಖ್​ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್​ ವಿರುದ್ಧ ಭೀಮ್ ಆರ್ಮಿ ಪಕ್ಷ ಚಂದ್ರಶೇಖರ್ ಆಜಾದ್ ಕಣಕ್ಕಿಳಿದಿದ್ದು, ಉಳಿದಂತೆ ಯಾವುದೇ ಪಕ್ಷ ಅಭ್ಯರ್ಥಿ ಹೆಸರು ಘೋಷಣೆ ಮಾಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!