ಉತ್ತರಪ್ರದೇಶದ ಚುನಾವಣೆ: ಕಣದಿಂದ ಹಿಂದೆ ಸರಿದ ಮಾಯಾವತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ವಿಧಾನಸಭೆ ಚುನಾವಣಾ ಈಗಾಗಲೇ ರಂಗೇರುತ್ತಿದ್ದು, ವಿವಿಧ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಮಾಡುವಲ್ಲಿ ಬ್ಯುಸಿಯಾಗಿವೆ. ಇದರ ನಡುವೆ ಅತ್ತ ಬಿಎಸ್​​​​ಪಿ ಮುಖ್ಯಸ್ಥೆ ಮಾಯಾವತಿ ಕೂಡ ಪಕ್ಷದ ಗೆಲುವಿಗಾಗಿ ಪ್ರಬಲ ಸ್ಪರ್ಧಿಗಳಿಗಾಗಿ ಸ್ಕ್ರೀನಿಂಗ್ ನಡೆಸುತ್ತಿದ್ದಾರೆ.
ಆದರೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಮಾತ್ರ ಚುನಾವಣೆಯಲ್ಲಿ ಸ್ಪರ್ದಿಸಲ್ಲ. ಹೌದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್​ ಚಂದ್ರ ಮಿಶ್ರಾ ಈ ಕುರಿತು ಘೋಷಿಸಿದ್ದು, ನಾನು ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇವೆ ಎಂದು ಘೋಷಿಸಿದ್ದಾರೆ.
ಮತದಾರರು ಈಗ ಬಿಎಸ್‌ಪಿಯಲ್ಲಿ ನಂಬಿಕೆ ಇಟ್ಟಿದ್ದು, ಬಿಎಸ್‌ಪಿ ಯಾವಾಗಲೂ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದು ಭರವಸೆ ನೀಡಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!