ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೀರತ್‌ನ ಲಾಲಾ ಲಜಪತ್ ರಾಯ್ ಸ್ಮಾರಕ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮಾಹಿತಿ ಪಡೆದ ತಕ್ಷಣ ಆರು ಅಗ್ನಿಶಾಮಕ ದಳ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಮುಖ್ಯ ಅಗ್ನಿಶಾಮಕ ಅಧಿಕಾರಿ ಸಂತೋಷ್ ಕುಮಾರ್ ಪ್ರಕಾರ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.