ಅನೇಕ ರೋಗಿಗಳಿಗೆ ಒಂದೇ ಸಿರಿಂಜ್ ಮರುಬಳಕೆ ಮಾಡಿದ ವೈದ್ಯ : ಬಾಲಕಿಗೆ ಎಚ್​ಐವಿ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅನೇಕ ರೋಗಿಗಳಿಗೆ ಒಂದೇ ಸಿರಿಂಜ್ ಅಥವಾ ಸೂಚಿ ಬಳಕೆ ಮಾಡಿದ ಪರಿಣಾಮ ಬಾಲಕಿಯೊಬ್ಬಳಿಗೆ ಎಚ್​ಐವಿ ತಗುಲಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಇಟಾಹ್‌ನಲ್ಲಿನ ಮಗುವೊಂದು ಎಚ್‌ಐವಿ ಪಾಸಿಟಿವ್ ಎಂದು ಪರೀಕ್ಷಿಸಿದ ನಂತರ ಆಕೆಯ ಸಂಬಂಧಿಕರು ಒಂದೇ ಸಿರಿಂಜ್‌ನಿಂದ ಹಲವಾರು ಮಕ್ಕಳಿಗೆ ಚುಚ್ಚುಮದ್ದು ನೀಡಲಾಗಿದೆ ಎಂದು ಆಸ್ಪತ್ರೆಗೆ ದಾಖಲಾದ ಬಾಲಕಿಯ ಪೋಷಕರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಕಿತ್ ಕುಮಾರ್ ಅಗರ್ವಾಲ್ ಅವರಿಗೆ ದೂರು ನೀಡಿದ್ದಾರೆ.

ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!