ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಕುಂಭ ಮೇಳದಲ್ಲಿ ಉತ್ತರ ಪ್ರದೇಶ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದ್ದರೂ ಕಾಲ್ತುಳಿತ ಸಂಭವಿಸಿ ಭಕ್ತಾದಿಗಳು ಗಾಯಗೊಂಡಿರುವುದು ದುರದೃಷ್ಟಕರ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹೇಳಿದ್ದಾರೆ.
ನಿರೀಕ್ಷೆಗೂ ಮೀರಿ ಜನ ಕುಂಭಮೇಳದಲ್ಲಿ ಭಾಗಿಯಾಗಿರುವ ಕಾರಣ ಕಾಲ್ತುಳಿತದ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.