ಕೆಲಸಕ್ಕೆ ಸೇರಿದ ಮಾರನೇ ದಿನವೇ ಹೆಣವಾದ ನರ್ಸ್: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ನರ್ಸಿಂಗ್ ಹೋಂ ಗೋಡೆ ಮೇಲೆ ನರ್ಸ್ ಶವ ನೇತಾಡುತ್ತಿರುವುದನ್ನು ಕಂಡು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಉನ್ನಾವೊದಲ್ಲಿರುವ ನ್ಯೂ ಜೀವನ್ ಆಸ್ಪತ್ರೆಯಲ್ಲಿ ನರ್ಸ್ ಶುಕ್ರವಾರ ನೇಮಕಗೊಂಡಿದ್ದಾರೆ. ಮರುದಿನ ಶನಿವಾರ ಕೆಲಸಕ್ಕೆ ಸೇರಿದ ಒಂದೇ ದಿನದಲ್ಲಿ ಆಕೆಯ ಮೃತದೇಹ ನರ್ಸಿಂಗ್ ಹೋಂನ ಗೋಡೆಯಲ್ಲಿ ನೇತಾಡುತ್ತಿರುವ ದೃಶ್ಯ ಸ್ಥಳೀಯರಲ್ಲಿ ಭಯದ ವಾತಾಔರಣ ಸೃಷ್ಟಿ ಮಾಡಿದೆ.

ನರ್ಸ್ ಸಾವಿನ ಸುದ್ದಿ ತಿಳಿದ ಕುಟುಂಬಸ್ಥರು ಸ್ಥಳಕ್ಕಾಗಮಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ ಎಂದು ಆರೋಪಿಸಿದರು. ನರ್ಸಿಂಗ್ ಹೋಂ ಮ್ಯಾನೇಜರ್ ಹಾಗೂ ಇತರ ಮೂವರ ಮೇಲೆ ಅನುಮಾನವಿದೆ ಎಂದು ದೂರಿದ್ದಾರೆ.

ನರ್ಸ್ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!