ಉತ್ತರ ಪ್ರದೇಶ | ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್: ಕಾಂಗ್ರೆಸ್ ಬಂಡಾಯ ಶಾಸಕಿಗೆ ಬಿಜೆಪಿ ಟಿಕೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಕಣ ದಿನೇ ದಿನೇ ರಂಗೇರುತ್ತಿದ್ದು, ಭಾರತೀಯ ಜನತಾ ಪಾರ್ಟಿ ಇಂದು ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಮಾಡಿದೆ.
85 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ ಬಂಡಾಯ ಶಾಸಕಿ ಅದಿತಿ ಸಿಂಗ್​ಗೆ ಬಿಜೆಪಿ ಟಿಕೆಟ್ ನೀಡಿದ್ದು, ರಾಯ್​ಬರೇಲಿ ಕ್ಷೇತ್ರದಿಂದ ಅದಿತಿ ಕಣಕ್ಕಿಳಿಯಲಿದ್ದಾರೆ.
ರಾಯ್​ಬರೇಲಿ ಕ್ಷೇತ್ರ ಕಾಂಗ್ರೆಸ್‌ನ​ ಭದ್ರಕೋಟೆಯಾಗಿದ್ದು, ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕ್ಷೇತ್ರದಿಂದಲೇ ಲೋಕಸಭಾ ಸಂಸದರಾಗಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದ ಅದಿತಿ ಸಿಂಗ್ ಸದಾ ಒಂದಿಲ್ಲೊಂದು ವಿಚಾರವನ್ನಿಟ್ಟುಕೊಂಡು ಪಕ್ಷದ ವಿರುದ್ಧ ಹರಿಹಾಯುತ್ತಿದ್ದರು. ಈ ಮೂಲಕ ಬಂಡಾಯ ಶಾಸಕಿಯಾಗಿ ಗುರುತಿಸಿಕೊಂಡಿದ್ದರು.
ಈ ಹಿಂದೆ ಕೃಷಿ ಕಾಯ್ದೆಗಳ ವಿಚಾರವಾಗಿ ಕೇಂದ್ರದ ನಿರ್ಧಾರ ಸಮರ್ಥಿಸಿ, ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಾದ ಮೇಲೆ ನವೆಂಬರ್ ತಿಂಗಳಲ್ಲಿ ಬಿಜೆಪಿ ಸೇರಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!