ರಾಜ್ಯ ಬಜೆಟ್| ಉತ್ತರ ಕನ್ನಡ ಜಿಲ್ಲೆಗೆ ಕೊನೆಗೂ ಸಿಕ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಪ್ರಸಕ್ತ ವರ್ಷ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಜತೆಗೆ ಪ್ರಸಕ್ತ ವರ್ಷದಲ್ಲಿ ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!