spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹೆಚ್ಚುತ್ತಿರುವ ಗಾಂಜಾ ದಂಧೆ ವಿರುದ್ಧ ಸಮರ ಸಾರಿದ್ದಾರೆ ಉತ್ತರ ಕನ್ನಡ ಪೊಲೀಸರು!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಕಾರವಾರ:

ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಗಾಂಜಾ ಪೂರೈಕೆ ಮತ್ತು ಮಾರಾಟದ ಜಾಲವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಗಾಂಜಾ ಪೂರೈಕೆಯ ಮೂಲ ಪತ್ತೆ ಹಚ್ಚಲು ನಿರಂತರ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜು ಅವರು ತಿಳಿಸಿದ್ದಾರೆ.

ಕಾರವಾರದ ಕಛೇರಿಯಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಗಾಂಜಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ವರ್ಷದ ಆರಂಭದಿಂದ ಇಲ್ಲಿಯ ವರೆಗೆ 23 ಗಾಂಜಾ ಮಾರಾಟದ ಪ್ರಕರಣಗಳನ್ನು ದಾಖಲಿಸಲಾಗಿದ್ದು 12 ಆರೋಪಿಗಳನ್ನು ಬಂಧಿಸಿ ಸುಮಾರು 10 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದ ಅವರು ಜಿಲ್ಲೆಗೆ ನೆರೆಯ ಮಹಾರಾಷ್ಟ್ರದ ಪುಣೆ, ಹಾವೇರಿ ಜಿಲ್ಲೆಯ ಹಾನಗಲ್ ಶಿವಮೊಗ್ಗದ ಸಾಗರ ಮೊದಲಾದ ಭಾಗಗಳಿಂದ ಗಾಂಜಾ ಪೂರೈಕೆ ನಡೆಯುತ್ತಿದೆ ಮುಖ್ಯ ಪೂರೈಕೆದಾರರ ಕೆಳಗೆ ಸುಮಾರು 10 ರಿಂದ 20 ಜನ ಮದ್ಯವರ್ತಿಗಳ ಕೈ ಸೇರಿ ಗ್ರಾಹಕರಿಗೆ ತಲುಪುತ್ತಿದೆ ಎಂದರು.

ಪ್ರವಾಸಿ ತಾಣವಾದ ಗೋಕರ್ಣದಲ್ಲಿ ವಿದೇಶೀಯರು ಸೇರಿದಂತೆ ಕೆಲವರ ಮೇಲೆ ಕ್ರಮ ಕೈಗೊಂಡ ನಂತರ ಯಾವುದೇ ಪ್ರಕರಣ ಕಂಡು ಬಂದಿಲ್ಲ, ಕೋವೀಡ್ ಕಾರಣದಿಂದ ಪ್ರವಾಸಿಗರ ಸಂಖ್ಯೆಯೂ ಕಡಿಮೆ ಇರುವುದೂ ಇದಕ್ಕೆ ಕಾರಣವಾಗಿರಬಹುದು, ಜಿಲ್ಲೆಯಲ್ಲಿ ಯುವ ಜನರು, ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿ ದಂಧೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಸಹ ಗಾಂಜಾ ಮಾರಾಟದ ಜಾಲಕ್ಕೆ ಕಡಿವಾಣ ಹಾಕುವ ಕೆಲಸ ನಿರಂತರವಾಗಿ ನಡೆಯಲಿದೆ ಎಂದು ಪೊಲೀಸ್ ವರಿಷ್ಠರು ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss