ನೆರೆಭೀತಿಯಲ್ಲಿ ಉತ್ತರ ಕನ್ನಡ: ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಜನಜೀವನ ತೀವ್ರ ಬಾಧಿತವಾಗಿದೆ.

ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು ಯಾವುದೇ ಕ್ಷಣ ನೆರೆಯ ಭೀತಿ ವ್ಯಕ್ತವಾಗಿದೆ. ಈ ಮಧ್ಯೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು,ಜು. 5ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ‌ಹೊರಡಿಸಿದ್ದಾರೆ.

ಜಿಲ್ಲಾಡಳಿತ ಎಲ್ಲ ಕಡೆ ಕಟ್ಟೆಚ್ಚರ ವಹಿಸಿದೆ‌.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!