Saturday, December 10, 2022

Latest Posts

ಆಳ ಕಮರಿಗೆ ಉರುಳಿದ ಮದುವೆ ದಿಬ್ಬಣದ ಬಸ್‌: 25 ಪ್ರಯಾಣಿಕರು ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ 50 ಜನರಿದ್ದ ಮದುವೆ ದಿಬ್ಬಣದ ಬಸ್ಸು ಕಮರಿಗೆ ಉರುಳಿದ ಪರಿಣಾಮ 25 ಜನರು ಸಾವನ್ನಪ್ಪಿದ್ದಾರೆ.
ಪೌರಿ ಗರ್ವಾಲ್ ಜಿಲ್ಲೆಯ ಸಿಮ್ಡಿ ಗ್ರಾಮದ ಬಳಿ ರಿಖ್ನಿಖಾಲ್-ಬಿರೋಖಾಲ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ವಿಪತ್ತು ನಿಯಂತ್ರಣ ಕೊಠಡಿಯ ಪ್ರಕಾರ, ಬಸ್ ಲಾಲ್‌ಧಾಂಗ್‌ನಿಂದ ಬಿರೋನ್‌ಖಾಲ್‌ನ ಹಳ್ಳಿಯೊಂದಕ್ಕೆ ತೆರಳುತ್ತಿದ್ದಾಗ, ರಾತ್ರಿ 8 ಗಂಟೆ ಸುಮಾರಿಗೆ ಸಿಮ್ರಿ ಬೆಂಡ್ ಬಳಿ 500 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದಿದೆ.
ತಕ್ಷಣವೇ ಅಪಘಾತದ ಸ್ಥಳಕ್ಕೆ ಧಾವಿಸಿದ ನಾಲ್ಕು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಸಿಬ್ಬಂದಿಗಳು ರಾತ್ರಿಯಿಡೀ 21 ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ನಂತರ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಏತನ್ಮಧ್ಯೆ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಆಗಮಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!