ಉತ್ತರಾಖಂಡ ಹಿಮಕುಸಿತ ದುರಂತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡಾ ಪರ್ವತ ಶಿಖರದಲ್ಲಿ ಅಕ್ಟೋಬರ್ 4 ರಂದು ಬೆಳಿಗ್ಗೆ ಟ್ರಕ್ಕಿಂಗ್‌ ಹೋದ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳು ಹಿಮಪಾತದಲ್ಲಿ ಸಿಲುಕಿದ್ದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಇದುವರೆಗೆ ಒಟ್ಟು 19 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 19 ಮೃತದೇಹಗಳನ್ನು ಇಂದು ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ಮೂಲಕ ಶವಗಳನ್ನು ಮಟ್ಲಿ ಹೆಲಿಪ್ಯಾಡ್‌ಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.

19 ಮೃತದೇಹಗಳ ಪೈಕಿ ನಾಲ್ಕು ಮೃತದೇಹಗಳನ್ನು ಎಸ್‌ಡಿಆರ್‌ಎಫ್ ತಂಡ ಶಿಬಿರಕ್ಕೆ ತರಲಾಗಿದ್ದು, 15 ಮೃತದೇಹಗಳನ್ನು ಘಟನೆಯ ಸ್ಥಳದಲ್ಲಿ ಇರಿಸಲಾಗಿದೆ.  ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP), ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (NIM), ವಾಯುಪಡೆ, ಸೇನೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಮತ್ತು ಜಮ್ಮುವಿನ ಗುಲ್ಮಾರ್ಗ್‌ನಲ್ಲಿರುವ ಹೈ ಆಲ್ಟಿಟ್ಯೂಡ್ ವಾರ್ ಸ್ಕೂಲ್‌ನ ವಿವಿಧ ತಂಡಗಳ ಸಿಬ್ಬಂದಿಯನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಪರ್ವತಾರೋಹಿಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ನಾನು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಉತ್ತರಕಾಶಿಯಲ್ಲಿ ಹಿಮಪಾತದಿಂದ ಬದುಕುಳಿದವರು ತಮ್ಮ ಭಯಾನಕ ಅನುಭವಗಳನ್ನು ವಿವರಿಸಿದರು. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಅಪಘಾತದಿಂದ ಬದುಕುಳಿದ ಗುಜರಾತ್‌ನ ಪ್ರಶಿಕ್ಷಣಾರ್ಥಿ ದೀಪ್ ಠಾಕೂರ್, ಬೆಳಿಗ್ಗೆ 9.45 ರ ಸುಮಾರಿಗೆ ದ್ರೌಪದಿಯ ದಂಡಾ ಶಿಖರಕ್ಕೆ ಶಿಖರವನ್ನು ಏರಲು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹಿಮಪಾತ ಸಂಭವಿಸಿದೆ ಎಂದು ಹೇಳಿದರು. ತನ್ನ ಸಹಚರರೊಂದಿಗೆ ಸುಮಾರು 60 ಅಡಿ ಆಳದ ಬಿರುಕುಗಳಿಗೆ ಬಿದ್ದು, ಸುಮಾರು 3 ಗಂಟೆಗಳ ಕಾಲ ಸಾವು ಮತ್ತು ಬದುಕಿನ ಮಧ್ಯೆ ಹೋರಾಡಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!